ಕುಮಟಾ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಕರಾವಳಿಯ ಪಟ್ಟಣವಾಗಿದ್ದು ಕಾರವಾರದಿಂದ ೬೦ ಕಿ.ಮಿ ದೂರದಲ್ಲಿ ಮತ್ತು ಹೊನ್ನಾವರದಿಂದ ಸುಮಾರು ೨೦ ಕಿ.ಮಿ ದೂರದಲ್ಲಿದೆ. ಪ್ರಕೃತಿ ಸೊಬಗಿಗೆ ಹೆಸರುವಾಸಿಯಾಗಿದ್ದು ವನ್ನಲ್ಲಿ, ಕಾಗಲ ಮತ್ತು ಧಾರೇಶ್ವರ ಬೀಚ್‍ಗಳು ಪ್ರಕೃತಿ ಪ್ರಿಯರನ್ನು ಆಕರ್ಷಿಸುತ್ತವೆ. ಶಾ೦ತೇರಿ ಕಾಮಾಕ್ಷಿ ದೇವಾಲಯ, ಮಹಾಲಸ ದೇವಾಲಯ, ಹೆಗಡೆ, ಬಾಡಾದ ಅಮ್ಮನವರ ದೇವಾಲಯಗಳು ಪ್ರಸಿದ್ದಿ ಪಡೆದಿದೆ. ಧಾರೇಶ್ವರದ ಧಾರಾನಾಥ ದೇವಾಲಯ ಕುಮಟಾದಿ೦ದ ೮ ಕಿ.ಮೀ ದೂರದಲ್ಲಿದ್ದು ಇಲ್ಲಿ ಶಿವನ ದೇವಾಲಯ ಗೋಕರ್ಣದ ಆತ್ಮಲಿ೦ಗದ ಒಂದು ಭಾಗ ಎಂದು ಹೇಳಲಾಗುತ್ತದೆ. ಪಾ೦ಡವರು ಒ೦ದೇ ರಾತ್ರಿಯಲ್ಲಿ ಕಟ್ಟಿದ ದೇವಾಲಯಗಳಲ್ಲಿ ಇದು ಒಂದು.ಹಾಗೆ ಭೂಮಿತಾಯಿ ಅಂದೆ.ಪ್ರಸ್ಸಿದ್ದಿ ಆದ ಶಾಂತಿಕಾಪರಮೇಶ್ವರಿ ತಾಯಿ ಇಲ್ಲಿ ನೆಲೆಸಿದ್ದಾಳೆ
Recent city comments: